ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಕಲೆ, ಸಂಗೀತ, ಶಿಕ್ಷಣ, ಯುವ ಬಹುಮುಖ ಪ್ರತಿಭೆ ಕುಮಾರ: ಸಮರ್ಥ ಉದಯ ಮಾನಕಾಮೆ ಅವರು “ಸರಸ್ವತಿ ಸಾಧಕ ಸಿರಿ” ರಾಷ್ಟ್ರ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಭಟ್ಕಳ ಪಟ್ಟಣದ ವಿದ್ಯಾ ಭಾರತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ 7ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು ತಮ್ಮ ಶಿಕ್ಷಣದ ಜೊತೆಗೆ ಚಿತ್ರಕಲೆ, ಸಂಗೀತ, ಆಟೋಟ, ಕಲೆ, ಇನ್ನೂ ಮುಂತಾದ
ಕ್ಷೇತ್ರದಲ್ಲಿ ತನ್ನದೇ ಆದ ಅಭಿರುಚಿ ಬೇಳಿಸಿಕೊಳ್ಳುವದರ ಜೊತೆಗೆ ಶಾಲೆಯಲ್ಲಿ ಕೂಡ ಓದುವುದರಲ್ಲಿ ಒಂದು ಹೆಜ್ಜೆ ಮುಂದೆ ಇರುತ್ತಾರೆ.
ಕೊರೋನಾ ಸಂದರ್ಭದಲ್ಲಿ ಕೂಡ ಆನ್ಲೈನ್ ಸ್ಪರ್ಧೆಯಲ್ಲಿ ಭಾಗವಹಿಸಿ ಬಹುಮಾನಗಳನ್ನು
ಪಡೆದುಕೊಂಡಿದ್ದಾರೆ, ನಂತರ ಸ್ಮಾರ್ಟ್ ಕ್ರಿಯೇಶನ್ಸ್ ಎಜುಕೇಶನ್ ಟ್ರಸ್ಟ್ ಬ್ರಹ್ಮಾವರ ಇವರು ನಡೆಸುವ ರಾಜ್ಯ ಮಟ್ಟದ ಅಂಚೆ ಕುಂಚ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ಸಾರ್ವಜನಿಕ ಶಿಕ್ಷಣ ಇಲಾಖೆಯವರು ನಡೆಸುವ ಪ್ರತಿಭಾ ಕಾರಂಜಿ ಸ್ಪರ್ಧೆ ಮತ್ತು ಮಿಮಿಕ್ರಿ ಹಾಗೂ ಚಿತ್ರಕಲೆಗಳಲ್ಲಿ ದ್ವಿತೀಯ ಸ್ಥಾನ, ಗಣೇಶನ ಚಿತ್ರ ಬಿಡಿಸುವ ಸ್ಪರ್ಧೆ ಬಹುಮಾನ, ಮತ್ತು
ಕೊಲ್ಲೆ ಫೌಂಡೇಶನ್ ಭಟ್ಕಳ ಅವರು
ನಡೆಸೆವ ಭಗವದ್ಗೀತ ಕಂಠಪಾಠ ಸ್ಪರ್ಧೆಯಲ್ಲಿ
ಪ್ರಥಮ ಸ್ಥಾನ, ಶಿಕ್ಷಣ ಇಲಾಖೆಯವರು ನಡೆಸುವ ಆಟೋ ಸ್ಪರ್ಧೆಗಳಲ್ಲಿ ಬಹುಮಾನ, ತಾಲೂಕು ಮಟ್ಟದ ಚೆಸ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ಚೆಸ್ ಅಚೀವರ್ಸ ಸ್ಕೂಲ್, ಉತ್ತರಕನ್ನಡ ಅವರು ಹಮ್ಮಿಕೊಂಡಿರುವ ಜಿಲ್ಲಾ ಮಟ್ಟದ ಚೆಸ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ,
ಇನ್ನೂ ಅನೇಕ ಶಾಲಾ, ಸಂಘಟನೆಗಳು ನಡೆಸುವ
ಹಲವಾರು ಕ್ಷೇತ್ರಗಳಲ್ಲಿ ಭಾಗವಹಿಸಿ ಪ್ರಥಮ ಸ್ಥಾನ
ಇವರ ಸಾಧನೆಗೆ ತಂದೆ ತಾಯಿಗಳು ಗುರು ಹಿರಿಯರು ಮುಖ್ಯ ಶಾಲೆಯ ಮುಖ್ಯ ಶಿಕ್ಷಕರು ಸಹ ಶಿಕ್ಷಕರು ಹಾಗೂ ಆಡಳಿತ ಮಂಡಳಿಯವರು ಪ್ರೋತ್ಸಾಹ ನೀಡುತ್ತಾ ಬಂದಿದ್ದಾರೆ. ನಂತರ ಕಲೆ, ಸಂಗೀತ, ಶಿಕ್ಷಣ, ಆಟೋಟ, ವಿವಿಧ ಕ್ಷೇತ್ರದಲ್ಲಿ ಸಾಧನೆಗೆ ಗೈದ್ದದನ್ನು ಗಮನಿಸಿ ಅನೇಕ ಸಂಘ ಸಂಸ್ಥೆಗಳು ಜಿಲ್ಲಾ, ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಪ್ರಶಸ್ತಿಗಳನ್ನು ನೀಡಿ ಗೌರವಸಿವೆ.
ಸಮರ್ಥ ಉದಯ ಮಾನಕಾಮೆ ಅವರು ವಿವಿಧ ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಸಾಧನೆಯನ್ನು ಗುರ್ತಿಸಿ
ಸರಸ್ವತಿ ಸಾಧಕ ಸಿರಿ ರಾಷ್ಟ್ರ ಪ್ರಶಸ್ತಿಗೆ ಆಯ್ಕೆ
ಮಾಡಲಾಗಿದೆ. ಇವರಿಗೆ “ಶ್ರೀಮತಿ ಸರಸ್ವತಿ ದಾಸಪ್ಪ ಶೆಣೈ ಪ್ರತಿಷ್ಠಾನ”, ಏಪ್ರಿಲ್ 27, 2025 ರಂದು ದಾವಣಗೆರೆ ನಗರದ ಚನ್ನಗಿರಿ ವಿರೂಪಾಕ್ಷಪ್ಪ ಕಲ್ಯಾಣ ಮಂಟಪದಲ್ಲಿ ವಿಜೃಂಭಣೆಯಿಂದ ಹಮ್ಮಿಕೊಂಡಿರು ರಾಜ್ಯಮಟ್ಟದ ಸಾಂಸ್ಕೃತಿಕ ಸಮಾರಂಭದಲ್ಲಿ “ಸರಸ್ವತಿ ಸಾಧಕ ಸಿರಿ” ರಾಷ್ಟ್ರ ಪ್ರಶಸ್ತಿಯನ್ನು ನೀಡಿ ಗಣ್ಯರ ಸಮ್ಮುಖದಲ್ಲಿ ಗೌರವಿಸಲಾಗುವುದು ಎಂದು ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ ಶೆಣೈ ರವರು ಪ್ರಕಟನಣೆ ತಿಳಿಸಿದ್ದಾರೆ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ