ಏಪ್ರಿಲ್ ೨೭ ರಂದು "ಸರಸ್ವತಿ ಸಾಧಕ ಸಿರಿ' ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಸಮಾರಂಭ

ದಾವಣಗೆರೆ: ಎ19. ಉಡುಪಿ ಜಿಲ್ಲೆಯ ಸಾಲಿಗ್ರಾಮದ ಶ್ರೀಮತಿ ಸರಸ್ವತಿ ದಾಸಪ್ಪ ಶೆಣೈ ಪ್ರತಿಷ್ಠಾನ ಮತ್ತು ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ಏಪ್ರಿಲ್ ೨೭ ರಂದು ಭಾನುವಾರದ ದಾವಣಗೆರೆಯ ಚನ್ನಗಿರಿ ವಿರೂಪಾಕ್ಷಪ್ಪ ಕಲ್ಯಾಣ ಮಂಟಪದಲ್ಲಿ ಬೆಳಿಗ್ಗೆ ೧೦ ಗಂಟೆಗೆ ನಾಡಿನ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ "ಸರಸ್ವತಿ ಸಾಧಕ ಸಿರಿ' ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ಸಂಸ್ಥೆಗಳ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈ ತಿಳಿಸಿದ್ದಾರೆ. ಮೈಸೂರಿನ ಕರ್ನಾಟಕ ಸುಗಮ ಸಂಗೀತ ಪರಿಷತ್ತು ಜಿಲ್ಲಾಧ್ಯಕ್ಷರಾದ ಡಾ. ನಾಗರಾಜ್ ಬೈರಿಯವರು ಉದ್ಘಾಟಿಸಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಪ್ರತಿಷ್ಠಾನದ ಅಧ್ಯಕ್ಷರಾದ ಡಾಕ್ಟರ್. ನಾಗೇಶ್ ಸಂಜೀವ ಕಿಣಿ ವಹಿಸಿಕೊಳ್ಳಲಿದ್ದಾರೆ.


ಮುಖ್ಯ ಅತಿಥಿಗಳಾಗಿ ಮೈಸೂರಿನ ರಾಜ್ಯಪಾಲರು, ಸಾಮಾಜಿಕ ಸಾಧಕರಾದ ಡಾ. ನ. ಗಂಗಾಧರಪ್ಪ, ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡದ ಸಾಹಿತಿ ಕವಯತ್ರಿ ಡಾ. ನಾಗರತ್ನ ಎಸ್. ಶೆಟ್ಟಿ, ಮೈಸೂರಿನ ಶೈಕ್ಷಣಿಕ ಸಾಧಕಿ ಶ್ರೀಮತಿ ಸಂಗೀತಾ ಪ್ರಸನ್ನ ನಾಡಿಗ್, ಅಮೇರಿಕದ ಬಹುಮುಖ ಪ್ರತಿಭೆ, ಅಂತರಾಷ್ಟ್ರೀಯ ನೃತ್ಯ ಕಲಾವಿದೆ ವಿದುಷಿ ಶ್ರೀಮತಿ ಆಶಾ ಅಡಿಗ ಆಚಾರ್ಯ, ಕಲಾ ಕುಂಚ ಅಧ್ಯಕ್ಷರಾದ ಕೆ.ಹೆಚ್.ಮಂಜುನಾಥ್, ಶ್ರೀಮತಿ ಸರಸ್ವತಿ ದಾಸಪ್ಪ ಶೆಣೈ ಪ್ರತಿಷ್ಠಾನ ಗೌರವ ಅಧ್ಯಕ್ಷರಾದ ಶ್ರೀಮತಿ ಜ್ಯೋತಿ ಗಣೇಶ್‌ಶೆಣೈ ವೇದಿಕೆಯಲ್ಲಿ ಗೌರವ ಉಪಸ್ಥಿತರಿರುತ್ತಾರೆ ಎಂದು ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ಶ್ರೀಪತಿ ರಾಘವೇಂದ್ರ ಶೆಣೈಯವರು ಪ್ರಕಟಿಸಿದ್ದಾರೆ. 




ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ